ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪಿ.ಕೆ.ಗಣೇಶ್ ಗೆಲುವು

28 gkp
Published on

ಗೋಣಿಕೊಪ್ಪಲು: ತಿತಿಮತಿ ಗ್ರಾಮ ಪಂಚಾಯಿತಿಯ ಒಂದು ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪಿ.ಕೆ.ಗಣೇಶ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.

ತಮ್ಮ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಶಂಕರ್ ವಿರುದ್ಧ 308 ಮತ ಗಳಿಸಿ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 113 ಮತ ಬಂದಿದ್ದು, 13 ಮತ ತಿರಸ್ಕೃತಗೊಂಡಿವೆ.

ಗೆಲುವಿನ ಬಳಿಕ ಮಾತನಾಡಿದ ಪಿ.ಕೆ.ಗಣೇಶ, ತನ್ನ ಗೆಲುವಿಗಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದರು.

ದೇವರಪುರ ವಲಯ ಅಧ್ಯಕ್ಷ ಭಸಂತ್ ಕುಮಾರ್, ವಿನಯ್, ಸತೀಶ್, ಪ್ರಕಾಶ್ ಹಾಗೂ ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net