

ಮದ್ದೂರು: ತಾಲೂಕಿನ ಮರಳಿಗ ಗ್ರಾಮದಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬದ ಅಂಗವಾಗಿ ಕಾಂಗ್ರೆಸ್ ಸಂಭ್ರಮ ಕಾರ್ಯಕ್ರಮವನ್ನು ಜ.16 ರಂದು ಸಂಜೆ 4 ಗಂಟೆಗೆ ಬಸವೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿ ಆಯೋಜಿಸಲಾಗಿದೆ.
ಗುಡಿಗೊಡ್ಡಿ ಗ್ರಾಮದ ಬೀರೇಶ್ವರ ಚನ್ನಕೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಂದ 300 ಕ್ಕೂ ಹೆಚ್ಚು ಬೈಕ್‌ಗಳ ಮೂಲಕ ರ‌್ಯಾಲಿ ನಡೆಸಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಮರಳಿಗ ಗ್ರಾಮಕ್ಕೆ ಕರೆತರಲಾಗುವುದು. ಮರಳಿಗ ಗ್ರಾಮದ ವಿಶ್ವೇಶ್ವರಯ್ಯ ವೃತ್ತದ ಬಳಿ ಬೃಹತ್ ಹಾರ ಹಾಗೂ ಪುಷ್ಪವೃಷ್ಟಿ ಸುರಿಸಿ ಬರಮಾಡಿಕೊಳ್ಳಲಾಗುವುದು ಎಂದು ಪಕ್ಷದ ಮುಖಂಡರಾದ ವೆಂಕಟೇಶ್, ಜವಾಹರಲಾಲ್, ಸ್ವಾಮಿ ಮತ್ತು ಯೋಗಾನಂದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ, ಮಧು ಜಿ.ಮಾದೇಗೌಡ ಅವರನ್ನು ಅಭಿನಂದಿಸಲಾಗುವುದು. ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಕಾಂಗ್ರೆಸ್ ಮುಖಂಡರಾದ ಘಟ್ಟಗಳ್ಳಿ ಹರೀಶ, ಬಿ.ಶಿವಣ್ಣ, ಸುನೀಲ್‌ಲಕ್ಷ್ಮೀಕಾಂತ್, ಚಿತ್ರನಟ ಸಚಿನ್ ಚಲುವರಾಯಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಹಾಗೂ ಸಂಜೆ 5 ಗಂಟೆಗೆ ಖ್ಯಾತ ಕಲಾವಿದರ ತಂಡದಿಂದ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.