ಕಾಂಗ್ರೆಸ್ ಸರ್ಕಾರದಿಂದ ಜನೋಪಯೋಗಿ ಕಾರ್ಯಕ್ರಮ

16-GPT-1A-
ಗುಂಡ್ಲುಪೇಟೆ ತಾಲೂಕಿನ ಕೆಲಸೂರು ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ ಗ್ರಂಥಾಲಯದಲ್ಲಿ ಗಣೇಶ್ ಪ್ರಸಾದ್ ಪುಸ್ತಕಗಳನ್ನು ವೀಕ್ಷಿಸಿದರು.
Published on

ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ ಐದು ಗ್ಯಾರಂಟಿಗಳನ್ನು ಈಡೇರಿಸುವ ಜತೆಗೆ ಸಾಕಷ್ಟು ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಹೇಳಿದರು.

ತಾಲೂಕಿನ ಕೆಲಸೂರು ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಿದ ನೂತನ ಗ್ರಂಥಾಲಯ ಕೊಠಡಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಬಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾಗಿದೆ. ಜನರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದು, ಜನತೆಯ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡಲಾಗುವುದು. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತರಲಾಗುವುದು. ಗ್ರಾಮದ ಸರ್ಕಾರಿ ಶಾಲೆಗೆ ಅಧಿಕಾರಿಗಳ ಜತೆ ಭೇಟಿ ನೀಡಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಕೆಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಗ್ಗಳದಹುಂಡಿ ಮಾದಪ್ಪ, ಸದಸ್ಯ ಶಿವಮಲ್ಲು, ತಾಪಂ ಇಒ ಅರಸು, ಪಿಡಿಒ ರವಿ, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net