ಕಾಂಗ್ರೆಸ್ ಸಾಧನ ಸಮಾವೇಶದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವು

Crime_20250717004156024.jpg
Published on

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಆಯೋಜಿಸಿದ್ದ ಸಾಧನ ಸಮಾವೇಶದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಎಡವಿ ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ತುರುಗನೂರು ಗ್ರಾಮದ ಕುಮಾರ್ (39) ಮೃತ.

ಅಂದು ಸಮಾವೇಶಕ್ಕಾಗಿ ಆಗಮಿಸಿದ್ದ ಕುಮಾರ್, ಕಾರ್ಯಕ್ರಮಕ್ಕೆ ತೆರಳುವ ಬದಲು ಸ್ನೇಹಿತನೊಂದಿಗೆ ರಾಮಸ್ವಾಮಿ ವೃತ್ತದ ಬಳಿ ಇರುವ ವೈನ್‌ಶಾಪ್‌ಗೆ ತೆರಳಿ ಮದ್ಯಪಾನ ಮಾಡಿದ್ದರು. ಅಲ್ಲಿಂದ ಹೊರಗೆ ಬರುವಾಗ ಎಡವಿ ಬಿದ್ದು ಮೃತಪಟ್ಟಿದ್ದರು. ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಮೈಸೂರಿನ ಶವಾಗಾರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಲಕ್ಷ್ಮೀಪುರಂ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net