

ಚಿತ್ರದುರ್ಗ: ಪ್ರಜ್ಞಾವಂತರು, ಪ್ರಬುದ್ಧರು, ಶಿಕ್ಷಿತರ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ರಾಜ್ಯ ಸರ್ಕಾರಕ್ಕೆ ಗುರುಗಳು ಮೆಚ್ಚುಗೆಯ ಮುದ್ರೆ ಒತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಡಿ.ಟಿ.ಶ್ರೀನಿವಾಸ್ ಗೆಲುವು ಶಿಕ್ಷಿತ ಮತದಾರರು ಬಿಜೆಪಿಯ ವಂಚನೆ, ಸುಳ್ಳು ಭರವಸೆ, ದ್ವೇಷದ ಹೇಳಿಕೆಗೆ ಬೇಸತ್ತು ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.