ಕಾಂಗ್ರೆಸ್​ನ 4ನೇ ಬೋಗಸ್ ಕಾರ್ಡ್

CM Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಚುನಾವಣೆಗಾಗಿ ಬೋಗಸ್ ಪಾಲಿಸಿ ತರುವುದು ಹಾಗೂ ಸುಳ್ಳು ಹೇಳುವುದು ಕಾಂಗ್ರೆಸ್​ನ ಗುಣಧರ್ಮ. ರಾಜ್ಯದಲ್ಲಿ ಬೋಗಸ್ ಕಾರ್ಡ್ ಸರಣಿ ನಡೆದಿದೆ. ಇಂದು 4ನೇ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ 4ನೇ ಗ್ಯಾರಂಟಿ ಕಾರ್ಡ್ ಬಗ್ಗೆ ಪ್ರಸ್ತಾಪಿಸಿ, ರಾಜಸ್ಥಾನ, ಛತ್ತೀಸಗಡನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮಾಶಾಸನ ಕೊಟ್ಟಿಲ್ಲ. ಅದರ ಪಟ್ಟಿ ನಾನು ಬಿಡುಗಡೆ ಮಾಡುತ್ತೇನೆ. ಚುನಾವಣೆಯಲ್ಲಿ ಇದ್ಯಾವುದೂ ನಡೆಯುವುದಿಲ್ಲ ಎಂದರು.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲವೆಂದು ಭರವಸೆ ನೀಡುತ್ತಿದ್ದಾರೆ. ಸುಳ್ಳು ಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ.ಜನ ನಂಬುವುದಿಲ್ಲ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net