ಕಾಂಗ್ರೆಸ್‌ನಿಂದ ಅಭಿವೃದ್ಧಿ ಕಾರ್ಯ

03 HANUR 1 A
ಕೊತ್ತಗುಳಿ ಗ್ರಾಮದಲ್ಲಿ ನಿರ್ಮಿಸಿರುವ ಸಂತ ಸೇವಾಲಾಲ್ ಸಮುದಾಯ ಭವನವನ್ನು ಶಾಸಕ ಆರ್.ನರೇಂದ್ರ ಉದ್ಘಾಟಿಸಿದರು. ಬಸವರಾಜು, ಮುರುಗೇಶ್, ಕೃಷ್ಣನಾಯ್ಕ, ಮುತ್ತುರಾಮ ಇತರರು ಇದ್ದರು.
Published on

ಹನೂರು: ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿರುವುದು ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ತಾಲೂಕಿನ ಕೊತ್ತಗುಳಿ ಗ್ರಾಮದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಸಂತ ಸೇವಾಲಾಲ್ ಸಮುದಾಯ ಭವನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ 150ಕ್ಕೂ ಹೆಚ್ಚು ಸಮುದಾಯ ಭವನವನ್ನು ನಿರ್ಮಿಸುವ ಮೂಲಕ ವಿವಿಧ ವರ್ಗದ ಜನರಿಗೆ ಅನುಕೂಲ ಕಲ್ಪಿಸಲಾಗಿದೆ. ಇದರಲ್ಲಿ 6 ಭವನಗಳು ಬಂಜಾರ ಸಮುದಾಯಕ್ಕೆ ಸೇರಿದೆ. ಜತೆಗೆ ಸಿಸಿ ರಸ್ತೆ, ಚರಂಡಿ, ಸೇತುವೆಗಳ ನಿರ್ಮಾಣ, ಶಾಲಾ, ಕಾಲೇಜು, ಹಾಸ್ಟೆಲ್ ಹಾಗೂ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ನಡೆದಿವೆ. ಆದರೆ ಕಳೆದ ಮೂರೂವರೆ ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಷೇತ್ರಕ್ಕೆ ಯಾವುದೇ ಅನುದಾನವನ್ನು ನೀಡಿಲ್ಲ ಎಂದರು.

ಬಹುತೇಕ ಕಡೆಗಳಲ್ಲಿ ಈಗಾಗಲೇ ಸಮುದಾಯ ಭವನ ನಿರ್ಮಿಸಲಾಗಿದೆ. ಆದರೆ ಕೆಲ ಗ್ರಾಮಗಳಲ್ಲಿ ಭವನವನ್ನು ಉಪಯೋಗಕ್ಕೆ ಬಳಸಿಕೊಳ್ಳುತ್ತಿಲ್ಲ. ಇದರಿಂದ ಸರ್ಕಾರದ ಹಣ ವ್ಯರ್ಥವಾದಂತಾಗಿದೆ. ಭವನವನ್ನು ಶುಭ, ಸಮಾರಂಭ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗೊಲ್ಲರದಿಂಬ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಶೇಷ ಅಭಿವೃದ್ಧಿ ಯೋಜನೆಯಡಿ 16.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಶಾಸಕ ಆರ್.ನರೇಂದ್ರ ಉದ್ಘಾಟಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಗ್ರಾಪಂ ಅಧ್ಯಕ್ಷ ಮುರುಗೇಶ್, ಉಪಾಧ್ಯಕ್ಷ ಕೃಷ್ಣನಾಯ್ಕ, ಕೆಆರ್‌ಐಡಿಎಲ್ ಎಇ ಶೋಭಾ, ಶಿಕ್ಷಕಿ ಶಶಿಕಲಾ, ಮುಖಂಡರಾದ ಮುತ್ತುರಾಮ, ರವಿ, ವಸಂತ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net