ಕಾಂಗ್ರೆಸ್‌ನಿಂದ ಅಭಿವೃದ್ಧಿ ಅಸಾಧ್ಯ

16..4
ಗೋಕಾಕದಲ್ಲಿ ಮಹಾ ಜನಸಂಪರ್ಕ ಅಭಿಯಾನ ಕರಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ ನೀಡಿದರು. ಭೀಮಶಿ ಭರಮನ್ನವರ, ರಾಜೇಂದ್ರ ಗೌಡಪ್ಪಗೋಳ, ಶಫಿ ಜಮಾದಾರ್, ಸುರೇಶ ಸನದಿ, ಅಬ್ಬಾಸ ದೇಸಾಯಿ ಇತರರಿದ್ದರು.
Published on

ಗೋಕಾಕ: ಕಾಂಗ್ರೆಸ್ ಪಕ್ಷ ಜನರಿಗೆ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಅಕಾರಕ್ಕೆ ಬಂದಿದ್ದು, ಈ ಸರ್ಕಾರದಿಂದ ರಾಜ್ಯದ ಅಭಿವದ್ಧಿ ಅಸಾಧ್ಯ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದರು. ನಗರದ ಹೊರವಲಯದಲ್ಲಿರುವ ಪ್ರಿಯದರ್ಶಿನಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕರ್ತರ ಸಮಾವೇಶ, ಬಿಜೆಪಿ ಮಹಾ ಜನಸಂಪರ್ಕ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಳಗಾವಿ ಲೋಕಸಭೆ ಅಭ್ಯರ್ಥಿ ಯಾರು ಎಂದು ತೆಲೆಕೆಡಿಸಿಕೊಳ್ಳಬೇಡಿ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರನ್ನು ಗೆಲ್ಲಿಸಲು ಒಗ್ಗಟ್ಟಾಗಿ ಶ್ರಮಿಸೋಣ ಎಂದರು. ಮಾಜಿ ಶಾಸಕ ಎಂ.ಎಲ್. ಮುತ್ತೆನ್ನವರ, ವಿಭಾಗ ಸಂಘಟನಾ ಪ್ರ.ಕಾರ್ಯದರ್ಶಿ ಜಯಪ್ರಕಾಶ ಎಂ.ಸಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಚಿಡೆ, ಸುಭಾಷ ಪಾಟೀಲ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಹಿಂದುಳಿದ ವರ್ಗಗಳ ರಾಷ್ಟ್ರೀಯ ಕಾರ‌್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಮುಖಂಡರಾದ ಮಲ್ಲಿಕಾರ್ಜುನ ಮಾದಮ್ಮನವರ, ಶಫಿ ಜಮಾದಾರ್, ಬಸವರಾಜ ಹಿರೇಮಠ, ಜ್ಯೋತಿ ಕೊಲ್ಹಾರ, ತವನರಾಜ ಬೆನ್ನಾಡಿ, ಎಫ್.ಎಸ್. ಸಿದ್ದನಗೌಡರ ಇದ್ದರು. ರಾಜೇಶ್ವರಿ ಒಡೆಯರ ಸ್ವಾಗತಿಸಿದರು. ಶಶಿಧರ ದೇಮಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net