ಕಾಂಗ್ರೆಸ್‌ನಿಂದ ಜಿಲ್ಲೆ ಅಭಿವೃದ್ಧಿ

4ss1mantargowda matu
Published on

ಶನಿವಾರಸಂತೆ: ಇದುವರೆಗೂ ಕೊಡಗು ಜಿಲ್ಲೆ ಅಭಿವೃದ್ಧಿಯಿಂದ ಹಿಂದುಳಿದಿತ್ತು. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಸಮರ್ಪಕ ಅನುದಾನದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಹೇಳಿದರು.


ಶನಿವಾರಸಂತೆ ಕೆ.ಆರ್.ಸಿ ವೃತ್ತದಲ್ಲಿ ಶನಿವಾರ ಆಯೋಜಿಸಿದ್ದ ಮತದಾರರ ಕೃಜ್ಞತಾ ಸಭೆಯಲ್ಲಿ ಮಾತನಾಡಿ, ಈ ಬಾರಿಯ ವಿಧಾನಸಬೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಅಭಿವೃದ್ಧಿ ನಿರೀಕ್ಷೆ ಇಟ್ಟುಕೊಂಡಿದ್ದ ಮತದಾರರು ಜಿಲ್ಲೆಯ ಎರಡೂ ಕ್ಷೇತ್ರದಲ್ಲೂ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ನಾವು ಮತದಾರರ ನಿರೀಕ್ಷೆ ಪೂರೈಸುತ್ತೇವೆ ಎಂದರು.


ಶನಿವಾರಸಂತೆಯಲ್ಲಿ ಬಸ್ ತಂಗುದಾಣ ವ್ಯವಸ್ಥೆ ಸೇರಿದಂತೆ ಹಲವು ಬಾಕಿಯಾಗಿರುವ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ಮುಂದೆ ಜಿ.ಪಂ. ತಾ.ಪಂ. ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಇದೇ ವೇಳೆ ಜನರಲ್ಲಿ ಮನವಿ ಮಾಡಿದರು.


ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಲೋಕೇಶ್ ಮಾತನಾಡಿದರು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಕಾಂಗ್ರೆಸ್ ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಟಿ.ಪಿ.ರಮೇಶ್, ಹಣಕೋಡು ಸುರೇಶ್ ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಫರ್ಜಾನ್ ಶಾಹಿದ್ ಖಾನ್, ಎಚ್.ಬಿ.ಜಯಮ್ಮ, ಸಂಜಯ್ ಜೀವಿಜಯ, ವಿ.ಪಿ.ಶಶಿಧರ್, ಜಯೇಂದ್ರ, ಎಸ್.ಸಿ.ಶರತ್‌ಶೇಖರ್, ಸರ್ದಾರ್ ಅಹಮ್ಮದ್ ಇತರರು ಇದ್ದರು. ಈ ಸಂದರ್ಭದಲ್ಲಿ ನೂತನ ಶಾಸಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net