ಕಾಂಗ್ರೆಸ್‌ನಿಂದ ಪರಿನಿರ್ವಾಣ ದಿನಾಚರಣೆ

Congress
Published on

ಚಿತ್ರದುರ್ಗ: ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಪರಿನಿರ್ವಾಣ ದಿನ ಆಚರಿಸಲಾಯಿತು.

ಎಸ್ಸಿ ಘಟಕದ ಅಧ್ಯಕ್ಷ ಜಯಣ್ಣ ಮಾತನಾಡಿ, ಅಂಬೇಡ್ಕರ್ ಅವರು ವಿದ್ವಾಂಸರಾಗಿ, ವಕೀಲರಾಗಿ, ಅರ್ಥಶಾಸ್ತ್ರಜ್ಞರಾಗಿ ಹಾಗೂ ತುಳಿತಕ್ಕೆ ಒಳಗಾದವರ ನಾಯಕರಾಗಿ ಹೊರಹೊಮ್ಮಿದ ಮಹಾನ್ ಚೇತನ ಎಂದು ಬಣ್ಣಿಸಿದರು.

ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಪದಾಧಿಕಾರಿಗಳಾದ ಕುಮಾರಸ್ವಾಮಿ, ರಮೇಶ್, ರಾಮಪ್ಪ, ಬೀರಾವರ ಮೂರ್ತಿ, ಸಂದೀಪ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net