ಕಾಂಗ್ರೆಸ್‌ನಿಂದ ಪೊಳ್ಳು ಭರವಸೆ

arun sahoo
ಸಂಸದ ಅರುಣ್ ಸಾಹೋ.
Published on

ಅರಸೀಕೆರೆ; ಈಡೇರಿಸಲಾಗದ ಪೊಳ್ಳು ಭರವಸೆ ನೀಡಿ ಕಾಂಗ್ರೆಸ್ ಜನರ ಕಣ್ಣಿಗೆ ಮಣ್ಣೆರಚಲು ಹೊರಟಿದೆ ಎಂದು ಛತ್ತೀಸ್‌ಘಡ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಅರುಣ್ ಸಾಹೋ ಟೀಕಿಸಿದರು.

ಕಳೆದ ನಾಲ್ಕೂವರೆ ವರ್ಷದಿಂದ ನಮ್ಮ ರಾಜ್ಯದಲ್ಲಿ ಒಂದು ಶಾಲಾ ಕಟ್ಟಡ ನಿರ್ಮಿಸಲಾಗದ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಉಚಿತ ವಿದ್ಯುತ್, ಉದ್ಯೋಗ ನೀಡುವ ಘೋಷಣೆಗಳು ಕೇವಲ ಘೋಷಣೆಗಳಾಗಿ ಉಳಿದಿವೆ. ಆದರೆ, ಚುನಾವಣಾ ಹೊಸ್ತಿಲಿನಲ್ಲಿ ವಾರಂಟಿ ಇಲ್ಲದ ಗ್ಯಾರೆಂಟಿ ಕಾರ್ಡ್ ವಿತರಿಸಿ ಮತ ಪಡೆಯಲು ಕೈ ನಾಯಕರು ಹುನ್ನಾರ ನಡೆಸಿದ್ದಾರೆ. ಇಂತಹ ಪೊಳ್ಳು ಭರವಸೆಗಳಿಗೆ ಇಲ್ಲಿನ ಮತದಾರರು ಮನ್ನಣೆ ನೀಡುವುದಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.

ಮೋದಿ, ಬೊಮ್ಮಾಯಿ ಸಾರಥ್ಯದ ಡಬಲ್ ಇಂಜಿನ್ ಸರ್ಕಾರ ಪ್ರಗತಿಯತ್ತ ದಾಪುಗಾಲಿಟ್ಟಿದೆ. ಉಭಯ ಸರ್ಕಾರಗಳ ಜನಪರ ಯೋಜನೆಗಳನ್ನು ಮುಂದಿಟ್ಟು ಮತಯಾಚನೆ ಮಾಡಲು ಮುಂದಾಗಿದ್ದೇವೆ. ಅರಸೀಕೆರೆ ವಿಧಾನಸಭಾ ಕ್ಷೇತ್ರ ಸೇರಿ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ಬಾರಿಯೂ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿವಿಟಿ ಬಸವರಾಜ್, ಗ್ರಾಮಾಂತರ ಮಂಡಲಾಧ್ಯಕ್ಷ ದುಮ್ಮೇನಹಳ್ಳಿ ರಮೇಶ್, ಉಪಾಧ್ಯಕ್ಷ ಅಣ್ಣಾಯ್ಕನಹಳ್ಳಿ ವಿಜಯಕುಮಾರ್, ನಗರಾಧ್ಯಕ್ಷ ಪುರುಷೋತ್ತಮ್, ಮುಖಂಡರಾದ ಕಾಟೀಕೆರೆ ಪ್ರಸನ್ನಕುಮಾರ್, ಡಿ.ಬಿ. ಗಂಗಾಧರ್, ಯಾದಾಪುರ ತೇಜಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net