

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಿಂದ ಬತುಲ್ ಕಿಲ್ಲೇದಾರ ಅವರನ್ನು ಅಮಾನತು ಮಾಡಲಾಗಿದೆ.
ಅಂಗನವಾಡಿಗೆ ಪೂರೈಕೆಯಾಗುವ ಪೌಷ್ಟಿಕ ಆಹಾರ ಅಕ್ರಮ ಸಾಗಣೆ ಪ್ರಕರಣದಲ್ಲಿ ಇವರ ವಿರುದ್ಧ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದ್ದಾರೆ.
ಬತುಲ್, ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯೆಯಾಗಿದ್ದರು. 2021ರಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂ 77ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.