

ಕಲಬುರಗಿ: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಮಾದಿಗ ಸಮಾಜದ ಮುಖಂಡರಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾ ಮಾದಿಗ ಸಮಾಜದ ಮುಖಂಡ ಮಂಜುನಾಥ ನಾಲವಾರಕರ್ ಆಗ್ರಹಿಸಿದರು. ಕಾಂಗ್ರೆಸ್‌ನಲ್ಲಿ ಹಲವು ವರ್ಷದಿಂದ ನಿಷ್ಠಾವಂತ ಕಾರ್ಯಕರ್ತರಾಗಿ ಸಮಾಜದ ಮುಖಂಡರು ಕೆಲಸ ಮಾಡುತ್ತಿದ್ದಾರೆ. ಅವರ ಶ್ರಮ, ಪಕ್ಷ ಸಂಘಟನೆಯನ್ನು ಗಮನಿಸಿ ಅವಕಾಶ ನೀಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ಹಿಂದೆ ಮಾದಿಗ ಸಮುದಾಯದ ಜಿ.ರಾಮಕೃಷ್ಣ, ದಿ.ಗುಂಡಪ್ಪ ಕೋರವಾರ ಅವರ ಪುತ್ರಿ ಚಂದ್ರಿಕಾ ಪರಮೇಶ್ವರಿ ಅವರಿಗೆ ವಿವಿಧ ಹುದ್ದೆಗಳಲ್ಲಿ ಅವಕಾಶ ನೀಡಿತ್ತು. ಪ್ರಸ್ತುತ ಮಾದಿಗ ಸಮಾಜದ ಹಿರಿಯ ನಾಯಕರು, ಕಾಂಗ್ರೆಸ್‌ನ ಕಟ್ಟಾಳು ಶಾಮ ನಾಟೀಕರ ಅವರಿಗೆ ವಿಧಾನಪರಿಷತ್‌ಗೆ ಕಾಂಗ್ರೆಸ್‌ನಿAದ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದರು. ಚಂದ್ರಕಾAತ ನಾಟೀಕರ, ಶಿವಕುಮಾರ ಅಜಾದಪುರ ಇತರರಿದ್ದರು.