

ಚಿತ್ರದುರ್ಗ: ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದಿಂದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶನಿವಾರ ಸಂವಿಧಾನ ಓದು ಕಾರ್ಯಕ್ರಮ ನಡೆಯಿತು. ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ, ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಕಾನೂನು ಘಟಕದ ರಾಜ್ಯಾಧ್ಯಕ್ಷ ಶ್ರೀಧರ್ ಜಾದವ್, ಜಿಲ್ಲಾಧ್ಯಕ್ಷ ಎನ್. ಶಶಾಂಕ್, ಖುದ್ದ್ದೂಸ್, ಪ್ರಕಾಶ್ ರಾಮನಾಯ್ಕ, ಮಧುಗೌಡ, ರಘು ಇತರರಿದ್ದರು.