ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಗಳ ರಕ್ಷಣೆ

08-GPT-1A-CONGRESS-
ಗುಂಡ್ಲುಪೇಟೆ ತಾಲೂಕಿನ ಕೂತನೂರು ಗ್ರಾಮದಲ್ಲಿ ಗಣೇಶ್‌ಪ್ರಸಾದ್ ಮತಯಾಚನೆ ಮಾಡಿದರು. ನಂಜಪ್ಪ, ಬಸವರಾಜು ಇದ್ದರು.
Published on

ಗುಂಡ್ಲುಪೇಟೆ: ಕಾಂಗ್ರೆಸ್‌ನಿಂದ ಮಾತ್ರ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಸಾಧ್ಯವಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲುವಿಗೆ ಎಲ್ಲರೂ ಒಗ್ಗೂಡಬೇಕು ಎಂದು ವಿಧಾನಪರಿಷತ್ ಸದಸ್ಯ ತಿಮ್ಮಯ್ಯ ಮನವಿ ಮಾಡಿದರು.

ಶನಿವಾರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಭೆಯಲ್ಲಿ ಅವರು ಮಾತನಾಡಿದರು.

ದಿ.ಮಹದೇವಪ್ರಸಾದ್ ಹಾಗೂ ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ತಾಲೂಕಿನ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿದ್ದಾರೆ. ಇದರಿಂದ ಬಡವರು ಬದುಕುವುದು ಕಷ್ಟವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನು ಭರವಸೆ ನೀಡಿದಂತೆ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ, ಮಹಿಳೆಯರಿಗೆ 2 ಸಾವಿರ ರೂ. ಮಾಸಿಕ ಧನ, ಉಚಿತ ವಿದ್ಯುತ್ ನೀಡಲಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಮತನೀಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶ್‌ಪ್ರಸಾದ್, ವಿಧಾನಪರಿಷತ್ ಮಾಜಿ ಸದಸ್ಯ ಧರ್ಮಸೇನಾ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಎಪಿಎಂಸಿ ಸದಸ್ಯ ಆರ್.ಎಸ್.ನಾಗರಾಜು, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಎಸ್.ಆರ್.ಎಸ್.ರಾಜಶೇಖರ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net