

ಹಾಸನ: ಕಾಂಗ್ರೆಸ್ ಪಕ್ಷದ ಸಹಾಯದಿಂದ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿ, ರಾಜ್ಯಸಭೆ ಸದಸ್ಯರು, ಲೋಕಸಭಾ ಸದಸ್ಯ ಸ್ಥಾನವನ್ನು ಪಡೆದುಕೊಂಡು ಈಗ ಕಾಂಗ್ರೆಸ್ ಗಿಡದಂತೆ ನಮ್ಮ ಪಕ್ಷವನ್ನು ಕಿತ್ತೊಗೆಯಬೇಕು ಎಂದು ಹೇಳುತ್ತಿರುವುದು ನಿಜಕ್ಕೂ ಖಂಡನೀಯ ಎಂದು ಕಾಂಗ್ರೆಸ್ ವಕ್ತಾರ ದೇವರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರು ರಾಜ್ಯಸಭಾ ಸದಸ್ಯರಾಗಿ ಮತ್ತು ಪ್ರಧಾನಿಯಾಗಿ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷ ಸಹಕಾರ ನೀಡಿತ್ತು. ಅಲ್ಲದೆ ಅವರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ಮತ್ತು ಪ್ರಜ್ವಲ್ ರೇವಣ್ಣ ಕಳೆದ ಬಾರಿ ಸಂಸದರಾಗಿರುವುದು ಕಾಂಗ್ರೆಸ್ ಪಕ್ಷದ ಸಹಕಾರದಿಂದಲೇ ಎಂಬುದನ್ನು ಮರೆಯಬಾರದು. ಆತ್ಮಸಾಕ್ಷಿ ಇದ್ದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಈ ರೀತಿ ಹೇಳಿಕೆಗಳನ್ನು ನೀಡಬಾರದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ನಮ್ಮ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಉತ್ತಮ ಅಭ್ಯರ್ಥಿಯಾಗಿದ್ದು ಈ ಬಾರಿ ಜಿಲ್ಲೆಯ ಜನರು ಅತೀ ಹೆಚ್ಚು ಮತಗಳಿಂದ ಗೆಲ್ಲಿಸುವ ವಿಶ್ವಾಸವಿದೆ. ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬಗ್ಗೆ ಆ ಪಕ್ಷದ ನಾಯಕರು ನಮ್ಮ ಅಭ್ಯರ್ಥಿ ತಪ್ಪು ಮಾಡಿದ್ದಾರೆ. ಅವರನ್ನು ಕ್ಷಮಿಸಿ ಮತ್ತೊಮ್ಮೆ ಅಧಿಕಾರಕ್ಕೆ ತನ್ನಿ ಎಂದು ಹೇಳುತ್ತಿದ್ದಾರೆ. ಅವರು ಯಾವ ತಪ್ಪು ಮಾಡಿದ್ದಾರೆ ಎಂಬುದನ್ನು ಕೂಡ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಸಂದರ್ಭದಲ್ಲಿ ಈ ಕ್ಷೇತ್ರದಿಂದ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹಾಸನದಿಂದ ಕೇವಲ 16 ಕಿ.ಮೀ ದೂರದಲ್ಲಿರುವ ಕಟ್ಟಾಯ ಕ್ಷೇತ್ರವನ್ನು ಹಾಸನಕ್ಕೆ ಸೇರಿಸದೆ 60 ಕಿಲೋಮೀಟರ್ ದೂರದ ಸಕಲೇಶಪುರಕ್ಕೆ ಸೇರಿಸಿದ್ದರು. ಈಗ ಅದೇ ಕಟ್ಟಾಯ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದೇವೆ, 300 ಕೋಟಿ ರೂ. ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಲ್ಲಿಗೆವಾಳಪ್ಪ, ಸ್ವಾಮಿಗೌಡ, ಕುಮಾರ್ ಶೆಟ್ಟಿ, ಮೊಹಮ್ಮದ್ ಅಲಿ