ಕಾಂಗ್ರೆಸ್​ಗೆ ತಾಪಂ ಮಾಜಿ ಅಧ್ಯಕ್ಷ ರಾಜೀನಾಮೆ

Capture
Published on

ಹುಮನಾಬಾದ್: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಡಾಕುಳಗಿ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. 5 ವರ್ಷಗಳ ಕಾಲ ತಾಪಂ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಸಹಕಾರ, ಬೆಂಬಲ ಮತ್ತು ಪ್ರೋತ್ಸಾಹ ನೀಡಿದ ನನ್ನ ರಾಜಕೀಯ ಮಾರ್ಗದರ್ಶಕರಾದ ಶಾಸಕ ರಾಜಶೇಖರ ಪಾಟೀಲ್ ಅವರಿಗೆ, ಪಕ್ಷದ ಎಲ್ಲ ಹಂತದ ಮುಖಂಡರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ರಾಜೀನಾಮೆ ಸ್ವೀಕರಿಸಿ ಅಂಗೀಕರಿಸಲು ಪಕ್ಷದ ನಗರ ಅಧ್ಯಕ್ಷ ಅಫ್ಸರ್ಮಿಯ್ಯಾ, ಗ್ರಾಮೀಣ ಅಧ್ಯಕ್ಷ ರಾಜಕುಮಾರ ಇಟಗಿ ಅವರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net