ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಬೆಂಬಲ

NEWS
ಮಾಜಿ ಸಚಿವ ಜಮೀರ್ ಅಹಮದ್ ಖಾನ್
Published on


ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿಕೆ

ಬೈಲಕುಪ್ಪೆ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ನೀಡಿದಷ್ಟು ಅನುದಾನವನ್ನು ಯಾವ ಮುಖ್ಯಮಂತ್ರಿಗಳೂ ನೀಡಿಲ್ಲ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಪಕ್ಷಗಳ ಹಲವರು ಮುಖ್ಯಮಂತ್ರಿಯಾದರೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರಲಿಲ್ಲ. ಸಿದ್ದರಾಮಯ್ಯ ಹೆಚ್ಚು ಅನುದಾನ ನೀಡಿದರು. ಹಾಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆ ಎಂದರು.

ವಕ್ಫ್ ಬೋರ್ಡ್ ಆಸ್ತಿ ಮತ್ತು ಹಣ ಸದ್ಬಳಕೆ ಮಾಡಿಕೊಂಡರೆ ಮುಸ್ಲಿಮರ ಅಭಿವೃದ್ಧಿಗೆ ಸರ್ಕಾರದ ಅನುದಾನ ಬೇಕಿಲ್ಲ. ಅಲ್ಲಿ ನಡೆದಿರುವ ಅವ್ಯವಹಾರಗಳು ಹಾಗೂ ಒತ್ತುವರಿ ಬಗ್ಗೆ ಸೂಕ್ತ ತನಿಖೆಯಾಗಲಿ. ಅದಕ್ಕೆ ನನ್ನ ಸಹಕಾರವಿದೆ ಎಂದರು.

ದೊಡ್ಡಹೊಸೂರು ಗ್ರಾಮದ ಜಾಮಿಯಾ ಮಸೀದಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಮುಖಂಡರು ಮಸೀದಿ ದುರಸ್ತಿ ಮಾಡಲು ಹಣ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಕೈಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಮಾಜಿ ಸಚಿವ ಕೆ.ವೆಂಕಟೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಿಸಿಸಿ ಸದಸ್ಯ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಹಮತ್ ಜಾನ್ ಬಾಬು, ಡಿ.ಟಿ.ಸ್ವಾಮಿ, ಮೈಸೂರು ವಕ್ಫ್ ಬೋರ್ಡ್ ಅಧ್ಯಕ್ಷ ಅಕ್ರಂ, ಮುಖಂಡರಾದ ಕಲ್ಯಾಣಪ್ಪ, ಶಿವಪ್ರಕಾಶ್, ರಿಯಾಜ್, ಅಸ್ಲಾಂ ಶೇಕ್, ಚೆನ್ನಕಲ್ ಶೇಖರ್, ಉತ್ತಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net