ಕಾಂತರಾಜುಗೆ ಕೆಲ ಜಾತಿ ಹೆಸರೇ ಗೊತ್ತಿಲ್ಲ

16ckd3
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 48.0; hist255: 0.0; hist252~255: 0.0; hist0~15: 0.0;
Published on

ಚಿಕ್ಕೋಡಿ: ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜಾತಿಗಳ ಮಧ್ಯೆ ಕಂದಕ ಸೃಷ್ಟಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಗೋವಿಂದ ಕಾರಜೋಳ ಆರೋಪಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಣತಿ ವರದಿ ರಾಜ್ಯದ ಜನರಿಗೆ ಮೋಸ ಮಾಡುವ ಹಾಗೂ ಮತ ಬ್ಯಾಂಕ್ ಆಗಿದೆ. ಕಾಂತರಾಜು ಅವರಿಗೆ ಕೆಲ ಜಾತಿ ಹೆಸರೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು. ಎಲ್ಲ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮೀಕ್ಷೆ ನಡೆಸಲಾಗಿಲ್ಲ. ಲಿಂಗಾಯತ ಒಳಪಂಗಡಗಳನ್ನು ಬೇರೆ ಬೇರೆಯಾಗಿ ನಮೂದು ಮಾಡಲಾಗಿದೆ. ಮುಸ್ಲಿಂ ಧರ್ಮದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಒಳಪಂಗಡಗಳಿವೆ. ಅವುಗಳನ್ನು ಪ್ರತ್ಯೇಕವಾಗಿ ಏಕೆ ನಮೂದು ಮಾಡಿಲ್ಲ ಹಾಗೂ ಅನೇಕ ಮಠಾಧೀಶರು ಜಾತಿ ಜನಗಣತಿ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ಕಾರಿದರು. ದಲಿತರಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸುಪ್ರಿಂಕೋರ್ಟ್ ಆದೇಶವನ್ನು ಎಲ್ಲ ರಾಜ್ಯಗಳು ಜಾರಿ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಪಕ್ಕದ ರಾಜ್ಯಗಳಲ್ಲಿ ಈಗಾಗಲೇ ಜಾರಿಯಾಗಿದೆ. ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ಸಿಗರು ಎರಡು ವರ್ಷವಾದರೂ ಏಕೆ ಒಳ ಮೀಸಲಾತಿ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದರು.

ವಿಪ ಮಾಜಿ ಸದಸ್ಯ ಅರುಣ ಶಹಾಪುರ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ದುಂಡಪ್ಪ ಬೆಂಡವಾಡೆ, ಅಪ್ಪಾಸಾಹೇಬ ಚೌಗಲಾ, ಪವನಕುಮಾರ ಮಹಾಜನ, ಸುಭಾಷ ಯರನಾಳೆ, ದೀಪಕ ಪಾಟೀಲ, ಎಂ.ಎಸ್. ಈಟಿ, ರಮೇಶ ಕಾಳನ್ನವರ, ಬಸವರಾಜ ಡೋಣವಾಡೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net