

ಯಡ್ರಾಮಿ: ಕಾಟಾಚಾರಕ್ಕೆ ಸ್ವಾತಂತ್ರ ದಿನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಮಂಗಳವಾರ ನಡೆಯಿತು. ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬೆಳಗ್ಗೆ ೯ಕ್ಕೆ ೭೭ನೇ ಸ್ವಾತಂತ್ರÈ ದಿನ ಹಮ್ಮಿಕೊಳ್ಳಲಾಗಿತ್ತು. ಆದರೆ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ. ಮಕ್ಕಳಿಗೆ ಕೂರಲು ಸುಣ್ಣದ ಗೆರೆ ಹಾಕಿರಲಿಲ್ಲ, ಪೂರ್ವಭಾವಿ ಸಭೆ ಕರೆದಿಲ್ಲ. ರಾಷ್ಟç ಉತ್ಸವವನ್ನು ಕಾಟಾಚಾರಕ್ಕಾಗಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ತಹಸೀಲ್ದಾರ್ ಬದಲು ಮಕ್ಕಳಿಂದಲೇ ಧ್ವಜಾರೋಹಣ ನೆರವೇರಿಸಬೇಕು ಎಂದು ಪಟ್ಟು ಹಿಡಿದರು. ಬಳಿಕ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಕ್ಷಮೆಯಾಚಿಸಿ, ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ ನಂತರ ವಾತಾವರಣ ತಿಳಿಯಾಯಿತು. ಬಳಿಕ ಧ್ವಜಾರೋಹಣ ನೆರವೇರಿಸಿದರು. ಪಪಂ ಮುಖ್ಯಾಧಿಕಾರಿ ಸಂತೋಷ ರೆಡ್ಡಿ, ತಾಪಂ ಇಒ ಮಹಾಂತೇಶ ಪುರಾಣಿಕ, ಜೆಸ್ಕಾಂ ಅಧಿಕಾರಿ ದೇವಿಂದ್ರ ಶಖಾಪುರ, ಪಿಎಸ್‌ಐ ಸುಖಾನಂದ ಸಿಂಗೆ ಇತರರಿದ್ದರು.