

ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೇಕರೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ ಸಂದರ್ಭದಲ್ಲಿ ತಪ್ಪಿಸಿಕೊಂಡು ಓಡುವಾಗ ಬಿದ್ದು ಗಾಯಗೊಂಡ ಕಾರ್ಮಿಕ ಮಹಿಳೆ ಕವಿತಾ (40)ಅವರ ಮನೆಗೆ ಗುರುವಾರ ಶಾಸಕ ಡಾ.ಮಂತರ್‌ಗೌಡ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಗಾಯಗೊಂಡ ಕವಿತಾ ಅವರಿಗೆ ಧೈರ್ಯ ತುಂಬಿದ ಶಾಸಕರು, ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮಸ್ಥರು ಅರಣ್ಯ ಉಪಸ್ಥಿತರಿದ್ದರು.