ಕಾಡಾನೆ ನಿಯಂತ್ರಣಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಮನವಿ

28 sri 01.
Published on

ಶ್ರೀಮಂಗಲ: ಕುಟ್ಟ ಗ್ರಾ.ಪಂ. ವ್ಯಾಪ್ತಿಯ ಪೂಜೆಕಲ್ಲು ಮತ್ತು ಮಂಚಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಅರಣ್ಯ ಇಲಾಖೆಗೆ ಸೂಚನೆ ನೀಡಬೇಕೆಂದು ಕಾಫಿ, ಬಾಳೆ, ಅಡಿಕೆ ಮತ್ತು ಕರಿಮೆಣಸು ಬೆಳೆಗಾರರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆ ಕಾಡಾನೆಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿಲ್ಲ. ಇದದಿಂದ ಬೆಳೆಗಾರರಿಗೆ ತೊಂದರೆಯಾಗಿದೆ. ಸಾರ್ವಜನಿಕರು ಧೈರ್ಯದಿಂದ ಓಡಾಡುವುದಕ್ಕೂ ಸಂಕಷ್ಟ ಎದುರಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಬೆಳೆದ ಬೆಳೆಗಳನ್ನು ಆನೆಗಳು ನಾಶ ಮಾಡಿ ಭಾರಿ ನಷ್ಟ ತಂದೊಡ್ಡುತ್ತಿವೆ. ಅಲ್ಲದೆ ಅರಣ್ಯ ಇಲಾಖೆಯಿಂದ ಅತ್ಯಂತ ಕಡಿಮೆ ಬೆಳೆ ಪರಿಹಾರ ನೀಡಲಾಗುತ್ತಿದೆ. ಇದರಿಂದ ಕೃಷಿ ಮಾಡುವುದೇ ದೊಡ್ಡ ಸಮಸ್ಯೆಯಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ ಸಂದರ್ಭ ಬೆಳೆಗಾರರಾದ ರಾಜೇಂದ್ರಪ್ರಸಾದ್, ಕಾಕೇರ ಸುರೇಶ್, ಹೊಟ್ಟೆಂಗಡ ತಿಮ್ಮು, ಬಳ್ಳಿಮನೆ ನಿಶಾಂತ್, ಎಸ್.ಎಲ್.ಮಹಾದೇವಪ್ಪ, ವಿ.ಪಿ.ಜಯಕುಮಾರ್, ಎಸ್.ಎಸ್.ಮನೋಜ್‌ಕುಮಾರ್, ಕೆ.ಎಂ.ಅನೂಪ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net