ಕಾಡಾನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ : ಸ್ಥಳದಲ್ಲೇ ಬೀಡುಬಿಟ್ಟ ಅಧಿಕಾರಿಗಳು, ಸಿಬ್ಬಂದಿ

siddapura kadane
Published on

ಕೊಡಗು: ಸಿದ್ದಾಪುರ ಕಾಫಿ ತೋಟಗಳಲ್ಲಿ ಅಡ್ಡಾಡಿ ಫಸಲು ನಾಶ ಮಾಡುವ ಮೂಲಕ ಕಾರ್ಮಿಕರು, ಬೆಳೆಗಾರರ ನಿದ್ದೆಗೆಡಿಸಿರುವ ಕಾಡಾನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.


ವಿರಾಜಪೇಟೆ ಅರಣ್ಯ ವಲಯದ ಅಮ್ಮತ್ತಿ ಶಾಖೆ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರ, ಇಂಜಲಗೆರೆ, ಕಣ್ಣಂಗಾಲ, ಯಡೂರು, ಹಚ್ಚಿನಾಡು, ಕಾವಾಡಿ, ಕುಂಬೇರಿ, ಪುಲೀಯೇಲಿ ಅನಂದಪುರ, ಗುಹ್ಯ ಸುತ್ತಮುತ್ತಲ ಪ್ರದೇಶಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಸೆರೆ ಹಿಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಶನಿವಾರ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.


ಸರ್ಕಾರ ಅನುಮತಿ ನೀಡಿದ ತಕ್ಷಣ ಮತ್ತಿಗೋಡು ಶಿಬಿರದ ನಾಲ್ಕು ಸಾಕಾನೆಗಳ ಸಹಕಾರದೊಂದಿಗೆ ಅಧಿಕಾರಿಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಗ್ರಾಮದ ಕಾಫಿ ತೋಟವೊಂದರಲ್ಲಿ ಉಳಿದುಕೊಂಡಿದ್ದಾರೆ. ಕಾಡಾನೆಗಳ ಚಲನವಲನ ಪತ್ತೆಗೆ ಮುಂದಾಗಿದ್ದಾರೆ.


ಸ್ಥಳಕ್ಕೆ ಉಪ ಸಂರಕ್ಷಣಾಧಿಕಾರಿ ಶರಣಬಸಪ್ಪ, ಸಹಾಯಕ ಸಂರಕ್ಷಣಾಧಿಕಾರಿ ಕೊಚ್ಚೆರ ನೆಹರು, ವಲಯ ಅರಣ್ಯಾಧಿಕಾರಿ ಕಳ್ಳಿರ ಎಂ. ದೇವಯ್ಯ, ಅರಣ್ಯ ಇಲಾಖೆಯ ಡಾ.ರಮೇಶ್, ಉಪವಲಯ ಅರಣ್ಯಾಧಿಕಾರಿ ಸಂಜೀತ್ ಸೋಮಯ್ಯ, ಚಂದ್ರಶೇಖರ್, ಅರುಣ್, ಕಾವಾಡಿಗಳು ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಸೇರಿದಂತೆ ಮತ್ತಿತರರು ಸ್ಥಳದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net