ಕಾಡಾನೆಗಳ ದಾಳಿಗೆ ಬೆಳೆ ನಾಶ

IMG-20230324-WA0127
Published on

ಗುಂಡ್ಲುಪೇಟೆ: ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಕಾಡಾನೆಗಳ ದಾಳಿಯಿಂದ ಬೆಳೆ ನಾಶವಾಗುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಂಡೀಪುರ ಹುಲಿ ಯೋಜನೆಯ ಓಂಕಾರ ವಲಯದ ಅರಣ್ಯದಿಂದ ಹೊರ ಬರುತ್ತಿರುವ ಆನೆಗಳ ಹಿಂಡು ಪದೇಪದೆ ಜಮೀನುಗಳಿಗೆ ದಾಳಿ ಇಡುತ್ತಿವೆ. ಕೋಟೆಕೆರೆ ಗ್ರಾಮದ ರಾಮಕೃಷ್ಣ ಅವರ ಜಮೀನಿಗೆ ಕಳೆದ ಒಂದು ವಾರದಲ್ಲಿ ಮೂರು ಬಾರಿ ದಾಳಿ ನಡೆಸಿ ಕಬ್ಬನ್ನು ತಿಂದು, ತುಳಿದು ನಾಶಪಡಿಸಿವೆ.

ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ ರಾತ್ರಿ ಗಸ್ತು ಹೆಚ್ಚಿಸಿಲ್ಲ. ಇದರಿಂದ ಕಷ್ಟ ಪಟ್ಟು ಬೆಳೆದ ಬೆಳೆಗಳು ನಾಶವಾಗುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ದಾಳಿ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net