ಕಾಡು ಪ್ರಾಣಿ ದಾಳಿಗೆ ಕರು ಬಲಿ

17Kush05
Published on

ಕುಶಾಲನಗರ: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಕರುವೊಂದು ಕಾಡುಪ್ರಾಣಿಯ ದಾಳಿಗೆ ಬಲಿಯಾಗಿದೆ. ಮಾಲೀಕರು ಚಿರತೆ ದಾಳಿಯ ಶಂಕೆ ವ್ಯಕ್ತಪಡಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.


ಬಸವೇಶ್ವರ ಬಡಾವಣೆ ನಿವಾಸಿ ಜಿ.ವಿ.ಕುಮಾರ್ ಅವರ ಹಸುವಿನ ಕರು ಕಾಡುಪ್ರಾಣಿ ದಾಳಿಗೆ ಬಲಿಯಾಗಿದ್ದು, ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಕೂಡಲೇ ವಲಯ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಮುಂದಿನ ಕ್ರಮ ಕೈಗೊಂಡರು.


ಕೆ.ಬಿ.ಶಂಶುದ್ಧೀನ್ ಮಾತನಾಡಿ, ಚಿರತೆ ದಾಳಿ ಶಂಕೆ ಇರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಹಾಗೂ ಕಾಡಿಗೆ ಸಿಬ್ಬಂದಿ ಕಳುಹಿಸಿ ಪರಿಶೀಲಿಸುವ ಬಗ್ಗೆ ವಲಯ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಬಗ್ಗೆಯೂ ಅಧಿಕಾರಿಗಳ ಗಮನ ಸೆಳೆಯಲಾಗಿದೆ.

ಗ್ರಾಮಸ್ಥರು ಆತಂಕಕ್ಕೀಡಾಗದೆ, ರಾತ್ರಿ ವೇಳೆ ಸುರಕ್ಷಿತವಾಗಿರುವಂತೆ ಮನವಿ ಮಾಡಿದ್ದಾರೆ. ಉಪವಲಯ ಅರಣ್ಯಾಧಿಕಾರಿ ಅನಿಲ್ ಡಿಸೋಜ, ಅರಣ್ಯ ಸಿಬ್ಬಂದಿ ಮಂಜೇಗೌಡ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net