

ಸಕಲೇಶಪುರ: ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಕಾಡು ಮರಗಳ ದಿಮ್ಮಿಗಳನ್ನು (ಬಿಲೇಟ್ಸ್) ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಆನೇಮಹಲ್ ಸಮೀಪ ವಾಹನವೊಂದರಲ್ಲಿ (ಕೆ.ಎ 01 ಎಡಿ 7399) ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿ ವಾಹನ ಹಾಗೂ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡರು.
ಗಸ್ತು ಅರಣ್ಯ ಪಾಲಕರಾದ ಉಮೇಶ್, ಲೋಕೇಶ್, ಜಯಸ್ವಾಮಿ ಹಾಗೂ ಅರಣ್ಯ ವೀಕ್ಷಕ ಲೋಕೇಶ್ ಇದ್ದರು.