ಕಾಡುಗೊಲ್ಲರನ್ನು ಅಲೆಮಾರಿ ಪಟ್ಟಿಗೆ ಸೇರಿಸಿ

Kadugolla
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.53761935, 0.5255713);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯದವರ ಭವಿಷ್ಯದ ಹಿತದೃಷ್ಟಿಯಿಂದ ಕೂಡಲೇ ಅಲೆಮಾರಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಮುದಾಯದ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಸರ್ಕಾರದ ಆದೇಶವಿದ್ದರೂ ರಾಜ್ಯದ ಬಹುತೇಕ ತಹಸೀಲ್ದಾರರು ಕಾಡುಗೊಲ್ಲ ಜಾತಿ ಪ್ರಮಾಣ ಪತ್ರ ನೀಡದೆ ತಿರಸ್ಕರಿಸುತ್ತಿದ್ದಾರೆ. ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ತ್ವರಿತವಾಗಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಬೇಕು ಎಂದು ಆಗ್ರಹಿಸಿದರು.

ಸಂಘ ರಾಜ್ಯಾಧ್ಯಕ್ಷ ಸಿ.ಶಿವುಯಾದವ್ ಮಾತನಾಡಿ, ಎರಡ್ಮೂರು ದಶಕಗಳಿಂದಲೂ ರಾಜ್ಯ ಕಾಡುಗೊಲ್ಲ ಸಮಾಜ ತನ್ನ ಆಸ್ಮಿತೆ, ಉಳಿವಿಗಾಗಿ ಹಿಂದಿನ ಸರ್ಕಾರಗಳ ವಿರುದ್ಧ ವಿವಿಧ ರೀತಿಯ ಹೋರಾಟ ಮಾಡುತ್ತ ಬಂದಿದೆ. ಆದರೂ ಆಡಳಿತ ನಡೆಸಿದ ಬಹುತೇಕ ಸರ್ಕಾರಗಳು ಕಾಡುಗೊಲ್ಲರನ್ನು ಮತ ಬ್ಯಾಂಕ್ ಆಗಿ ಬಳಸಿಕೊಂಡಿದೆಯೇ ಹೊರತು ಬದುಕು ಕಟ್ಟಿಕೊಡುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ದೂರಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಿದ್ದು, ಜಾತಿ ಪ್ರಮಾಣ ಪತ್ರ ನೀಡದ ಕಾರಣ ಅದನ್ನು ವಿತರಿಸಿದ ನಂತರ ಅರ್ಜಿ ಸ್ವೀಕರಿಸುವ ಅಂತಿಮ ದಿನ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಸಮುದಾಯವನ್ನು ಎಸ್ಟಿಗೆ ಸೇರಿಸುವ ಶಿಫಾರಸು ರಾಜ್ಯಕ್ಕೆ ಮರಳಿ ಬಂದಿದ್ದು, ಸರ್ಕಾರ ಕೂಡಲೇ ಮರು ಪರಿಶೀಲಿಸಬೇಕು. ಸಚಿವ ಸಂಪುಟದಲ್ಲಿ ಅನುಮೋದಿಸಿ ತ್ವರಿತವಾಗಿ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಶಿಫಾರಸು ಮಾಡಬೇಕು. ಪರಿಶಿಷ್ಟ ಪಂಗಡ ಪಟ್ಟಿಗೆ ಸೇರುವವರೆಗೂ ಪ್ರವರ್ಗ-1ರ ಮೀಸಲಾತಿ ಮುಂದುವರೆಸಲು ಸ್ಪಷ್ಟ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಡಿ.ಶಿವಣ್ಣ ಮಾತನಾಡಿ, ಅಲೆಮಾರಿ-ಅರೆ ಅಲೆಮಾರಿಗಳಿಗೆ ವಸತಿ ಯೋಜನೆಯಡಿ ನೀಡುವ ಹಣದ ಮೊತ್ತವನ್ನು 1.2 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಬೇಕು. ಕಾಡುಗೊಲ್ಲರ ಹಟ್ಟಿಗಳಿಗೆ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಸರ್ಕಾರ ಮೂಢನಂಬಿಕೆಗಳ ಕುರಿತು ಜಾಗೃತಿ ಶಿಬಿರ ನಡೆಸಬೇಕು ಎಂದು ಕೋರಿದರು.

ಮಾಜಿ ಶಾಸಕ ಎ.ವಿ.ಉಮಾಪತಿ, ಮಾಜಿ ಎಂಎಲ್ಸಿ ಜಯಮ್ಮ ಬಾಲರಾಜ್, ಸಂಘದ ತಾಲೂಕು ಅಧ್ಯಕ್ಷ ಹರೀಶ್ ಪೂಜಾರ್, ಮುಖಂಡರಾದ ಮೂಡಲಗಿರಿಯಪ್ಪ, ತಿಮ್ಮೇಶಿ, ಕಲ್ಲೇಶಿ, ತಿಮ್ಮಯ್ಯ, ಸುದೀಪ್, ಹೇಮಂತಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net