

ಕುಶಾಲನಗರ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು, ಭುವನಗಿರಿ, 6ನೇ ಹೊಸಕೋಟೆ, ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಮರೂರು, ಹಳೆಕೋಟೆ ವ್ಯಾಪ್ತಿಯಲ್ಲಿ ಕಾಡಾನೆ, ಕಾಡು ಹಂದಿ ಹಾವಳಿ ಹೆಚ್ಚಾಗಿರುವ ಬಗ್ಗೆ ಗ್ರಾಮಸ್ಥರು ದೂರಿಕೊಂಡಿದ್ದಾರೆ.
ಕಾಡುಪ್ರಾಣಿಗಳ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದ್ದು ಸೂಕ್ತ ರಕ್ಷಣೆ ನೀಡುವಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ ಅವರನ್ನು ಮಂಗಳವಾರ ಭೇಟಿ ಮಾಡಿದ ರೈತರು ಬೆಳೆ ನಷ್ಟ ಪರಿಹಾರ, ಕಾಡಂಚಿಗೆ ರೈಲ್ವೇ ಕಂಬಿಗಳ ಅಳವಡಿಕೆ, ಸೋಲಾರ್ ವಿದ್ಯುತ್ ತಂತಿ ಸರಿಪಡಿಸುವ ಬಗ್ಗೆ ಮನವಿ ಪತ್ರ ಸಲ್ಲಿಸಿದರು.
ಗ್ರಾಮಸ್ಥರಾದ ಧನಂಜಯ, ನಾಗೇಶ್, ರಾಜಶೇಖರ, ಕಣಿವೆ ನಂಜುಂಡಸ್ವಾಮಿ, ರವಿ, ಅಪ್ಪಾಜಿ ಜವರಪ್ಪ, ಮಹಾದೇವ ಮತ್ತಿತರರು ಇದ್ದರು. ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಬಿ.ಎಸ್. ಗುರುಪ್ರಸಾದ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.