ಕಾಡುಹಂದಿಗಳಿಂದ ಫಸಲು ನಾಶ

Published on

ಹನೂರು: ತಾಲೂಕಿನ ಎಂ.ಟಿ. ದೊಡ್ಡಿ ಗ್ರಾಮದ ಜಮೀನೊಂದಕ್ಕೆ ಬುಧವಾರ ರಾತ್ರಿ ಕಾಡು ಹಂದಿಗಳ ಹಿಂಡು ಲಗ್ಗೆಇಟ್ಟು 2 ಎಕರೆಯಲ್ಲಿದ್ದ ಮುಸುಕಿನ ಜೋಳದ ಫಸಲನ್ನು ನಾಶಪಡಿಸಿವೆ.

ಗ್ರಾಮದ ಶ್ರೀನಿವಾಸ ಎಂಬುವರು ಜಮೀನಿನಲ್ಲಿ ಮುಸುಕಿನ ಜೋಳದ ಫಸಲು ಕಟಾವಿನ ಹಂತಕ್ಕೆ ಬಂದಿತ್ತು. ತಡರಾತ್ರಿ 30ಕ್ಕೂ ಹೆಚ್ಚು ಕಾಡು ಹಂದಿಗಳ ಹಿಂಡು ಜಮೀನಿಗೆ ಲಗ್ಗೆ ಇಟ್ಟು ಫಸಲವನ್ನು ತಿಂದು ನಾಶಪಡಿಸಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅವರು ದೂರಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಒತ್ತಾಯಿಸಿದ್ದಾರೆ. ಕಳೆದ ಹಲವು ತಿಂಗಳಿನಿಂದ ಈ ಭಾಗದಲ್ಲಿ ಕಾಡು ಹಂದಿಗಳ ಹಾವಳಿ ವಿಪರೀತವಾಗಿದೆ. ಜಮೀನುಗಳಿಗೆ ನುಗ್ಗಿ ಫಸಲನ್ನು ನಾಶಪಡಿಸುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡು ಹಂದಿಗಳ ಹಾವಳಿಗೆ ಕಡಿವಾಣ ಹಾಕುವಂತೆ ರೈತರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net