ಕಾಣದ ಕೈಗಳನ್ನು ಪತ್ತೆ ಹಚ್ಚಿ

CTD 4 KENGUNTE JAYANNA--02
Published on


ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತ ಐವರು ನೊಂದ ಕುಟುಂಬಗಳಿಗೆ ತಲಾ 50 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಹಾಗೂ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಿತ್ಯವೂ ಸಾವಿನ ಸಂಖ್ಯೆ ಏರುತ್ತಿದೆ. ಕಲುಷಿತ ನೀರು ಕವಾಡಿಗರಹಟ್ಟಿ ಎ.ಕೆ.ಕಾಲನಿಗೆ ಪೂರೈಕೆಯಾಗಿದ್ದಾದರೂ ಹೇಗೆ? ಪ್ರಕರಣಕ್ಕೆ ಸಂಬಂ ಧಿಸಿದಂತೆ ನಗರಸಭೆಯ ಇಬ್ಬರು ಇಂಜಿನಿಯರ್, ನೀರು ಪೂರೈಕೆ ಸಹಾಯಕ, ನೀರಗಂಟೆಇಯನ್ನು ಅಮಾನತುಪಡಿಸಿರುವುದು ಕೇವಲ ಕಣ್ಣೊರೆಸುವ ತಂತ್ರವಾಗಿದ್ದು,ದುರ್ಘಟನೆ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು. ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net