ಚಾಮರಾಜನಗರ: ತಾಲೂಕಿನ ಕಾವುದವಾಡಿ ಗ್ರಾಮದ ಸಿದ್ದರಾಜು ಎಂಬುವರು ಕಾಣೆಯಾಗಿದ್ದು, ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
46 ವರ್ಷದ ಸಿದ್ದರಾಜು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ, ಕಪ್ಪು ತಲೆಗೂದಲು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಸುಳಿವು ದೊರೆತಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆ ದೂ.ಸಂ 08226-240250, ಪಿಎಸ್‌ಐ ಮೊ.ಸಂ: 9480804650, ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂ 08226-222383 ಸಂಪರ್ಕಿಸುವಂತೆ ಸಂತೇಮರಹಳ್ಳಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.