ಕಾನೂನು ಅರಿವು ಕಾರ್ಯಕ್ರಮ

24.NPK-1..
Published on

ನಾಪೋಕ್ಲು: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು ಎಂದು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ಶನಿವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯವೂ ಹಾಳಾಗುತ್ತದೆ. ವ್ಯಕ್ತಿತ್ವವೂ ನಾಶವಾಗುತ್ತದೆ. ಸಮಾಜದ ಸ್ವಾಸ್ಥ್ಯವೂ ಕೆಡುತ್ತದೆ ಎಂದವರು ಹೇಳಿದರು.ಮಾದಕ ವಸ್ತು ಮತ್ತು ಮೊಬೈಲ್ ಫೋನ್ ಬಳಕೆ ಬಗ್ಗೆ ಎಚ್ಚರಿಕೆ ಅಗತ್ಯ. ಶಿಕ್ಷಣದ ಮೂಲಕ ಜ್ಞಾನವನ್ನು ಗಳಿಸಿಕೊಂಡು ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಬೇಕು. ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಎಂದಿಗೂ ಕಾನೂನನ್ನು ಉಲ್ಲಂಘನೆ ಮಾಡಬಾರದು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ. ಹ್ಯಾರಿಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ವಿಜಿತ್, ಉಪಪ್ರಾಂಶುಪಾಲ ಶಿವಣ್ಣ, ಎಸ್‌ಡಿಎಂಸಿ ಸದಸ್ಯರಾದ ಹರೀಶ್, ಶಶಿ ಮಂದಣ್ಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net