

ಗೋಣಿಕೊಪ್ಪ:ಕಾವೇರಿ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ನ್ಯಾಯಾಲಯದ ನ್ಯಾಯಧೀಶೆ ಕೆ.ಎಸ್.ಆಶಾ, ಕಾನೂನು ನೆರವು ಮತ್ತು ಅರಿವಿನ ಬಗ್ಗೆ ಜಾಗೃತಿ ಮೂಡಿಸಿದರು.
ಮಹಿಳೆಯರು ಜೀವನದಲ್ಲಿ ಅನುಭವಿಸುವ ತೊಂದರೆ, ದಬ್ಬಾಳಿಕೆ ಸಂದರ್ಭ, ಕಾನೂನು ಬಲವನ್ನು ಪಡೆದುಕೊಳ್ಳಬೇಕಿದೆ. ಯಾವ ರೀತಿ ರಕ್ಷಿಸಿಕೊಳ್ಳಬಹುದು ಎಂಬುವುದನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಸಂಜೀವಿನಿ ಒಕ್ಕೂಟ ಸದಸ್ಯೆಯರು ಪಾಲ್ಗೊಂಡಿದ್ದರು.
ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಪೊನ್ನಂಪೇಟೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೀತಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಚೈತ್ರ ಬಿ. ಚೇತನ್ ಇದ್ದರು.