

ಕೆ.ಎಂ.ದೊಡ್ಡಿ: ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಹಲವು ಮಹನೀಯರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಜನತೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ದೇಶದ ಕಾನೂನುಗಳನ್ನು ಪಾಲಿಸಬೇಕು ಎಂದು ಸಬ್‌ಇನ್ಸ್‌ಪೆಕ್ಟರ್ ರಾಮಸ್ವಾಮಿ ಅಭಿಪ್ರಾಯಪಟ್ಟರು.
ಇಲ್ಲಿನ ಪ್ರಾರ್ಥನಾ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ದೇಶದ ಸ್ವಾತಂತ್ರೃ ಪಡೆಯಲು ಹಲವು ಮಹಾತ್ಮರು ಪ್ರಾಣ ತ್ಯಾಗ ಮಾಡಿದ್ದು, ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕು. ಮನೆ-ಮನೆಗೆ ಧ್ವಜ ಉತ್ತಮ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ದೇಶ ಪ್ರೇಮ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಸಂಸ್ಥೆಯ ಅಧ್ಯಕ್ಷ ರವಿಸಾವಂದಿಪುರ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಕೃಷ್ಣ, ನಿರ್ದೇಶಕರಾದ ತೊರೆಚಾಕನಹಳ್ಳಿ ಶಂಕರೇಗೌಡ, ವೈ.ಬಿ.ಶ್ರೀಕಂಠಸ್ವಾಮಿ, ಶಿಕ್ಷಕರಾದ ಅಶ್ವಿನಿ, ಸವಿತಾ, ಶೋಭಾರಾಣಿ, ಸ್ಮಿತಾ, ರಮ್ಯಾ, ಪ್ರಿಯಾಂಕಾ, ಕೃತಿಕಾ, ರಂಜಿತಾ, ರೂಹಿ, ಕೆ.ಎನ್.ಅನುಪಮಾ ಇದ್ದರು.