

ಬಾಳೆಹೊನ್ನೂರು: ಒಮ್ಮೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೆ ಆ ವ್ಯಕ್ತಿಗೆ ಸರ್ಕಾರಿ ನೌಕರಿ, ಖಾಸಗಿ ಕಂಪನಿಗಳಲ್ಲಿ ಕೆಲಸ ಸಿಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಅಪರಾಧ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಪಿಎಸ್‌ಐ ವಿ.ಟಿ.ದಿಲೀಪ್‌ಕುಮಾರ್ ಹೇಳಿದರು.
ಪಟ್ಟಣದ ಎಸ್‌ಜೆಆರ್ ಪಿಯು ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ಮಕ್ಕಳ ಕಳ್ಳ ಸಾಗಣೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಮಯದಲ್ಲಿ ಕೇವಲ ಕಲಿಕೆಗೆ ಬೇಕಾದ ಮಾಹಿತಿ ಪಡೆಯಲು ಮಾತ್ರ ಮೊಬೈಲ್ ಬಳಸಬೇಕು. ೇಸ್‌ಬುಕ್, ಇನ್ಸ್ಟಾಗ್ರಾಮ್, ವ್ಯಾಟ್ಸಪ್‌ಗಳಲ್ಲಿ ವಿದ್ಯಾರ್ಥಿಗಳು ತಮ್ಮ ೆಟೋಗಳನ್ನು ಹಂಚಿಕೊಳ್ಳಬಾರದು ಎಂದರು.
ಅಪರಿಚಿತ ವ್ಯಕ್ತಿಗಳಿಗೆ ನಿಮ್ಮ ೆಟೋಗಳನ್ನು ಶೇರ್ ಮಾಡಬಾರದು. ಅಪರಿಚಿತ ಸಂಖ್ಯೆಗಳಿಂದ ಒಟಿಪಿ ಸಂಖ್ಯೆ ಕೇಳಿದರೆ ಯಾವುದೇ ಕಾರಣಕ್ಕೂ ಹಂಚಿಕೊಳ್ಳಬಾರದು. ನಕಲಿ ಐಡಿ ಹೊಂದಿದ ೇಸ್‌ಬುಕ್, ಇನ್ಸ್ಟಾಗ್ರಾಮ್ ಖಾತೆಗಳಿಂದ ಕೆಲವು ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿರುವ ಜಾಲವಿದ್ದು ಇದರಿಂದ ದೂರವಿರಬೇಕು. ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೆ ಗಂಭೀರ ಪ್ರಕರಣ ದಾಖಲಿಸಲಾಗುವುದು ಎಂದರು. ಪ್ರಾಚಾರ್ಯ ಕೆ.ಆರ್.ಭೂದೇಶ್, ಮುಖ್ಯಶಿಕ್ಷಕ ಬಿ.ಎಸ್.ಕುಮಾರ ಚಂದ್ರನಾಯಕ್, ಉಪನ್ಯಾಸಕ ರಾಕೇಶ್, ಪ್ರಶಾಂತ್, ಸಾಂಚಿತಾ, ಎಎಸ್‌ಐ ಗಂಗಶೆಟ್ಟಿ, ಸಿಬ್ಬಂದಿ ನಾಗರಾಜ್, ಕಲ್ಲೇಶ್ ಇತರರಿದ್ದರು.