

ಆಲೂರು: ಕಾನೂನಿನ ತಿಳಿವಳಿಕೆ ಇಲ್ಲದೆ ಜನರು ಹಲವು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರೂ ಆದ ತಾಲೂಕು ಕಾನೂನು ಸೇವಾ ಸದಸ್ಯ ಕಾರ್ಯದರ್ಶಿ ಎಂ.ಸಿ.ನಿರ್ಮಲಾ ತಿಳಿಸಿದರು.
ತಾಲೂಕ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಚಿನ್ನೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಇತ್ತೀಚೆಗೆ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಯೊಬ್ಬರು ಕಾನೂನುಗಳನ್ನು ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಕಾನೂನು ಅರಿವು ಅಗತ್ಯ. ಕಾನೂನಿನ ಬಗ್ಗೆ ಜ್ಞಾನ ಬರಬೇಕಾದರೆ ಕಾನೂನು ವಿಷಯವನ್ನು ಪಠ್ಯದಲ್ಲಿ ಅಳವಡಿಸಿ ಶಿಕ್ಷಣದ ಭಾಗವಾಗಿಸಬೇಕು ಎಂದು ಸಲಹೆ ನೀಡಿದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಚ್.ಡಿ.ಮಧು, ಹಿರಿಯ ವಕೀಲ ಕೆ.ಜಿ.ನಾಗರಾಜ್, ಮುಖ್ಯ ಶಿಕ್ಷಕ ಎ.ಟಿ.ಮಲ್ಲೇಶ್, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್ ಇತರರು ಇದ್ದರು.