ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

Published on

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಮತ್ತು ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಗುತ್ತಿಗೆ ಆಧಾರದ‌ ಮೇಲೆ "ಕಾನೂನು ಸಲಹೆಗಾರರ" ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು, ಕಾನೂನು ಪದವೀಧರರು (ಎಲ್.ಎಲ್.ಬಿ), ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ನಿವೃತ್ತ ತಹಸೀಲ್ದಾರ ಹಾಗೂ ನಿವೃತ್ತ ಉಪ ತಹಸೀಲ್ದಾರ ಇವರು ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ ಎಂದು‌ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಜು 12 ರಿಂದ ಪ 30ರ ಅಪರಾಹ್ನ 3 ಗಂಟೆ ವರೆಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ನಿಗದಿತ ಅವಧಿಯಲ್ಲಿ ಜಿಲ್ಲಾಧಿಕಾರಿಗಳು, ಕಲಬುರಗಿ ಕಾರ್ಯಾಲಯಕ್ಕೆ ಅರ್ಜಿದಾರರು ನೇರವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ತಡವಾಗಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಇನ್ನು ಕಾನೂನು ಸಲಹೆಗಾರರೆಂದು ನೇಮಕವಾದವರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು-1958ರ ನಿಯಮ 313(ಬಿ) ಪ್ರಕಾರ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net