ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು

avanna mayakeri
Published on

ಕಲಬುರಗಿ: ಅಧಿಕಾರಿಗಳು ಕಾಂಗ್ರೆಸ್ ಏಜೆಂಟರAತೆ ಕೆಲಸ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ ಆರೋಪಿಸಿದರು.
ಶಿಥಿಲಗೊಂಡಿರುವ ಶಾಲಾ ತರಗತಿ ಕೊಠಡಿಗಳ ದುರಸ್ತಿಗೂ ಸರ್ಕಾರದ ಬಳಿ ಹಣವಿಲ್ಲ. ಗ್ಯಾರಂಟಿ ನೆಪದಲ್ಲಿ ರಸ್ತೆ, ಕುಡಿಯುವ ನೀರು ಸೇರಿ ಕನಿಷ್ಠ ಮೂಲಸೌಕರ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಜಿಮ್ಸ್ ಎದುರಿನ ಬಾಪುನಗರ ಮಾಂಗರವಾಡಿ ಕಾಲನಿಯ ಮರಾಠಿ ಮಾಧ್ಯಮ ಶಾಲೆ ಕಟ್ಟಡಕ್ಕೆ ೫೫ ವರ್ಷವಾಗಿದ್ದು, ಶಿಥಿಲಾವಸ್ಥೆಯಲ್ಲಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗದ ೧೫೭ ಮಕ್ಕಳು ಕಲಿಯುತ್ತಾರೆ. ಹೊಸ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಮ್ಸ್ನಲ್ಲಿ ರೋಗಿಗಳನ್ನು ಕಡೆಗಣಿಸಲಾಗುತ್ತಿದೆ. ವೈದ್ಯರ ಬಳಿ ರೋಗಿಗಳ ಮಾಹಿತಿಯೇ ಇಲ್ಲ. ಜಿ¯್ಲೆಯಲ್ಲಿ ಡೆಂಘೆಗೆ ಸಂಬAಧಿಸಿದAತೆ ೯೨೬ ಜನರ ಪರೀಕ್ಷೆ ಆಗಿದ್ದು, ೧೯೫ ಜನರಿಗೆ ಜ್ವರ ದೃಢಪಟ್ಟಿದೆ. ಒಬ್ಬ ರೋಗಿ ಮಾತ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸರ್ಕಾರಿ ಆಸ್ಪತ್ರೆ ಮೇಲೆ ವಿಶ್ವಾಸ ಇಲ್ಲದ ಕಾರಣ ಜನರು ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದರು.
ಅಫಜಲಪುರ ತಾಲೂಕಿನ ಕಿರಸಾವಳಗಿ ರಸ್ತೆ ಸರಿಯಿಲ್ಲದ್ದರಿಂದ ಬಸ್ ಸಂಚರಿಸುತ್ತಿಲ್ಲ. ವಿದ್ಯಾರ್ಥಿಗಳು ಸೇರಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ೧೧ಕ್ಕೆ ಚವಡಾಪುರ ಕ್ರಾಸ್‌ನಲ್ಲಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟಿಸುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net