ಕಾಬೂಲ್‌ನಿಂದ ಮರಳಿದ ಕೇರೂರಿನ ಯೋಧ

22ckd12-Web
Published on

ಚಿಕ್ಕೋಡಿ: ಕಾಬೂಲ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಯೋಧ ದಸ್ತಗೀರ್ ಮುಲ್ಲಾ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ದಸ್ತಗೀರ್ ಅವರು ಆ.12 ರಂದು ಅಫ್ಘಾನಿಸ್ತಾನದಿಂದ ಕುಟುಂಬಸ್ಥರ ಜತೆ ದೂರವಾಣಿ ಮೂಲಕ ಮಾತನಾಡಿ, ನನ್ನ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಳಲು ತೋಡಿಕೊಂಡಿದ್ದರು. ಬಳಿಕ ಸಂಪರ್ಕಕ್ಕೆ ಸಿಗದೇ ಇದ್ದಾಗ ಮನೆಯವರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಆ.15 ರಂದು ಕರೆ ಮಾಡಿ ಭಾರತಕ್ಕೆ ವಾಪಸ್ಸಾಗಿದ್ದೇನೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಇದರಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಯೋಧನ ಪತ್ನಿ ಜುಬೇದಾ ಮುಲ್ಲಾ ಮಾತನಾಡಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಹಿಂಸಾಚಾರದಿಂದ ನಾನು ಪತಿಯ ವಿಷಯದಲ್ಲಿ ಆತಂತಕ್ಕೆ ಒಳಗಾಗಿದ್ದೆ. ಆದರೆ, ಆ.15ರಂದು ಭಾರತಕ್ಕೆ ವಾಪಸ್ ಆಗಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net