ಕಾಮಗಾರಿ 2 ತಿಂಗಳಲ್ಲಿ ಪೂರ್ಣಗೊಳಿಸಲು ಗಡುವು

1fdf966f-ba17-430c-a8f7-d7c4a3bba9fe
Published on

ಬಾಗಲಕೋಟೆ: ಬಹುಗ್ರಾಮ‌ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು 2 ತಿಂಗಳಲ್ಲಿ ಪೂರ್ಣಗೊಳಿಸಿ ಕಾರ್ಯಾಚರಣೆಗೊಳಿಸುವಂತೆ ಜಿ.ಪಂ ಸಿಇಒ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಸಭಾಬವನದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ, ಡಿಬಿಓಟಿ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆ, ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿ ಬಿ ಓ ಟಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಂಡು ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮೆಲ್ಲ ಕರ್ತವ್ಯವಾಗಿದೆ. ವಿಳಂಬಕ್ಕೆ ಅವಕಾಶ ನೀಡಬೇಡಿ ಎಂದರು.

ಸಭೆಯಲ್ಲಿ ಉಪ ಸಂರಕ್ಷಣಾಧಿಕಾರಿಗಳು ಅರಣ್ಯ ಇಲಾಖೆ ಬಾಗಲಕೋಟೆ ಶ್ರೀ ಆಕಾಶ್ ಕಾರ್ಯನಿರ್ವಾಹಕ ಅಭಿಯಂತರರು ಗ್ರಾ.ಕು.ನೀ & ನೈ ವಿಭಾಗದ ಬಾಗಲಕೋಟೆ, ಕಾರ್ಯನಿರ್ವಾಹಕ ಅಭಿಯಂತರರು, ಲೋಕೋಪಯೋಗಿ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿಂಗ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಅಭಿಯಂತರರು, ಶ್ರೀ ಪರಶುರಾಮ್ ಜಿ. ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಹಾಜರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net