ಕಾಮಗಾರಿ ನಡೆದ ದಿನವೇ ಕಿತ್ತು ಬಂದ ಡಾಂಬರು!

ಫೋಟೋ ಶೀರ್ಷಿಕೆ 05 ಸಿಆರ್_ಪಿ-2ಎ
Published on
  • ಚನ್ನರಾಯಪಟ್ಟಣ: ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ, ಕಳಪೆ ಗುಣಮಟ್ಟದಿಂದ ಕೂಡಿದ್ದು, ಸೋಮವಾರ ರಸ್ತೆ ಕಾಮಗಾರಿ ನಡೆಸಿದ ದಿನವೇ ಡಾಂಬರು ಕಿತ್ತು ಬಂದಿದ್ದು, ಗುತ್ತಿಗೆದಾರ ಮತ್ತು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಅನೇಕ ವರ್ಷಗಳಿಂದ ರಸ್ತೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಶಾಸಕರನ್ನು ಒತ್ತಾಯಿಸಿದ್ದ ಹಿನ್ನಲೆಯಲ್ಲಿ ಶಾಸಕರ ಅನುದಾನದಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಡಾಂಬರು ಹಾಕಿದ ಒಂದೇ ದಿನಕ್ಕೆ ಕಿತ್ತುಬಂದಿದೆ. ಇದರಿಂದ ತೀವ್ರ ಆಕ್ರೋಶಗೊಂಡಿರುವ ಗ್ರಾಮಸ್ಥರು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು, ಉತ್ತಮ ರಸ್ತೆ ನಿರ್ಮಿಸಿಕೊಡುವಂತೆ ಲೋಕಪಯೋಗಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    ರಸ್ತೆ ಡಾಂಬರು ಕಿತ್ತು ಬಂದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್ ಮುಖಂಡ ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ರಸ್ತೆಯು ಕಳಪೆಯಿಂದ ಕೂಡಿದೆ. ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಈತ ಶಾಸಕರ ಪರಮಾಪ್ತ. ಈತನ ಮನೆ ಮೇಲೆ ಲೋಕಾಯುಕ್ತ ದಾಳಿಯೂ ನಡೆದಿದೆ. ನಮ್ಮ ಸರ್ಕಾರದ ಆಡಳಿತದಲ್ಲಿ ಕಳಪೆ ಕಾಮಗಾರಿಗಳಿಗೆ ಅವಕಾಶವಿಲ್ಲ. ಟೆಂಡರ್ ನಿಯಮ ಕಡ್ಡಾಯವಾಗಿ ಪಾಲನೆಯಾಗಬೇಕು. ರಸ್ತೆ ಕಳಪೆ ಕುರಿತಾಗಿ ಲೋಕೋಪಯೋಗಿ ಇಲಾಖೆಯ ಇಇ, ಎಇಇ ಗಮನಕ್ಕೆ ತಂದಿದ್ದೇನೆ ಎಂದರು,
    ಇದೇ ರೀತಿ ನೀರಾವರಿ ನಿಗಮದಲ್ಲಿ 5 ಕೋಟಿ ರೂ.ವೆಚ್ಚದ ಕಾಮಗಾರಿಗಳನ್ನು ನಿರ್ವಹಿಸದೇ ಬಿಲ್ ಬರೆಯುವ ಕೆಲಸವಾಗುತ್ತಿದೆ. ಈ ಕುರಿತಾಗಿ ಶೀಘ್ರವೇ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net