

ಸೋಮವಾರಪೇಟೆ: ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಕಳಪೆ, ಅವಶ್ಯವಿಲ್ಲದ ಕಡೆ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಿಸಲಾಗಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಸಪ್ಪ, ಕಾರ್ಯಪಾಲಕ ಇಂಜಿನಿಯರ್ ಶಿವಪ್ರಕಾಶ್, ಸಹಾಯಕ ಇಂಜಿನಿಯರ್ ಹೇಮಂತ್‌ಕುಮಾರ್ ತಂಡ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು .ಕೆಲವು ಕಡೆ ಕಾಮಗಾರಿ ಗುಣಮಟ್ಟವನ್ನು ಹೊಂದಿಲ್ಲ. ತಕ್ಷಣವೇ ಸರಿಪಡಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು.
ಇದೇ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ನಾಚಪ್ಪ ಇದ್ದರು.