ಕಾಮಗಾರಿ ಪೂರ್ಣಗೊಳಿಸಲು ಸೂಚನೆ

20 HANUR 3
Published on

ಹನೂರು: ಕೆ.ಶಿಪ್ ಯೋಜನೆಯಡಿ ಪ್ರಗತಿಯಲ್ಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಶಾಸಕ ಎಂ.ಆರ್ ಮಂಜುನಾಥ್ ಸೂಚಿಸಿದರು.


ಪಟ್ಟಣದ ಪಿಡಬ್ಯುಡಿ ಅತಿಥಿ ಗೃಹದ ಆವರಣದಲ್ಲಿ ಶುಕ್ರವಾರ ಕೆ.ಶಿಪ್ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಕೊಳ್ಳೇಗಾಲದಿಂದ ಹನೂರಿನವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವು ಕಡೆ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ಬಾಕಿ ಉಳಿದಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಜತೆಗೆ ಸಿಂಗನಲ್ಲೂರು ಗ್ರಾಮದ ಬಳಿ ಅಗ್ಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಮುನ್ನೆಚ್ಚರಿಕೆಯ ಕ್ರಮ ವಹಿಸಬೇಕು. ಇನ್ನು ಪಟ್ಟಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ಮಧ್ಯ ಭಾಗದಲ್ಲಿರಿಸಿ ವೃತ್ತ ನಿರ್ಮಿಸಬೇಕು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಕೆ.ಶಿಪ್ ಎಇಇ ರಾಜು, ಚಾಮುಲ್ ನಿರ್ದೇಶಕ ಮಹದೇವಪ್ರಸಾದ್, ಪಪಂ ಸದಸ್ಯ ಮಹೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net