

ಹನೂರು: ಸಮೀಪದ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ಶನಿವಾರ ನಟ, ನಿರ್ದೇಶಕ ಪ್ರಕಾಶ್ ರೈ ಭೇಟಿ ನೀಡಿ ಪಿಆರ್‌ಎಫ್ ಫೌಂಡೇಷನ್ ವತಿಯಿಂದ ತುರ್ತು ವಾಹನ ಉಚಿತವಾಗಿ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿ, ಹನೂರು ಭಾಗದ ಬಹುತೇಕ ಗ್ರಾಮಗಳು ಹೆಚ್ಚಾಗಿ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಹೋಲಿಕ್ರಾಸ್ ಅಸ್ಪತ್ರೆಯೂ ಹಿಂದಿನಿಂದಲೂ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ. ಅಲ್ಲದೆ ಕಿಚ್ಚುಗುತ್ತಿ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಸಂದರ್ಭದಲ್ಲಿ ಈ ಆಸ್ಪತ್ರೆಯ ಸೇವೆ ಅಪಾರ. ಹಾಗಾಗಿ ಈ ಭಾಗದ ಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ತುರ್ತು ವಾಹನವನ್ನು ನೀಡಲಾಗುತ್ತಿದೆ ಎಂದರು.
ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ, ಸಿಸ್ಟರ್ ಗ್ರಾಸಿಯಾ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.