ಕಾಯಕ ರತ್ನ ಪ್ರಶಸ್ತಿಗೆ ಶಿವಕುಮಾರ ಭಾಜನ

12-01
Published on

ಭಾಲ್ಕಿ: ತಾಲ್ಲೂಕಿನ ತೇಗಂಪೂರ ಗ್ರಾಮದ ಶಿವಕುಮಾರ ಪಾಟೀಲ ಅವರು ಬೆಂಗಳೂರಿನ ನಡೆದಾಡುವ ದೇವರ ಸೇವಾ ಟ್ರಸ್ಟ್ ವತಿಯಿಂದ ಕೊಡ ಮಾಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ-2023 ಕ್ಕೆ ಭಾಜನರಾಗಿದ್ದಾರೆ.

ಲಿಂಗಾಯತ ಮುಖಂಡರು, ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿ ಹಾಗೂ ಹಿತೈಷಿಗಳ ಸಂಘದ ಬೀದರ್‌ ಜಿಲ್ಲಾಧ್ಯಕ್ಷರಾಗಿ ಶಿವಕುಮಾರ ಪಾಟೀಲರು ಮಾಡುತ್ತಿರುವ ಸಾಮಾಜಿಕ, ಧಾರ್ಮಿಕ, ಮಾನವೀಯ ಕಾರ್ಯಗಳನ್ನು ಗುರುತಿಸಿ ಕಾಯಕ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಫಲಕ, ಪ್ರಮಾಣ ಪತ್ರ ಒಳಗೊಂಡಿರುವ ಈ ಪ್ರಸ್ತಿಯೂ ಜೂ.4 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಲಾಗುವುದು ಎಂದು ಆಯ್ಕೆ ಪತ್ರದಲ್ಲಿ ನಡೆದಾಡುವ ದೇವರ ಸೇವಾ ಟ್ರಸ್ಟ್‌ ಅಧ್ಯಕ್ಷ ಮಂಜುನಾಥ ಎಸ್. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net