ಕಾಯಕದಲ್ಲಿ ಪ್ರಾಮಾಣಿಕತೆ ಅವಶ್ಯಕ

8kudachi1
Published on

ಕುಡಚಿ: ಕಾಯಕದ ಶ್ರಮದಿಂದ ಬಂದಿರುವ ಅನ್ನದಿಂದ ಮನುಷ್ಯನಿಗೆ ಸುಖ, ಶಾಂತಿ, ನೆಮ್ಮದಿ ಸಂತೃಪ್ತಿ ಸಿಗಲು ಸಾಧ್ಯ ಎಂದು ಡಾ.ಅಭಿನವ ಬ್ರಹ್ಮಾನಂದ ಸ್ವಾಮೀಜಿ ಹೇಳಿದರು.

ಹಾಲಶಿರಗೂರ ಗ್ರಾಮದಲ್ಲಿ ಶ್ರೀಲಕ್ಷ್ಮಿದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ವೇದಾಂತ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ಉದ್ಯೋಗಕ್ಕೂ ಅದರದೆ ಘನತೆ ಗೌರವ ಇದೆ. ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆ ಇರಬೇಕೆಂದು ತಿಳಿಸಿದರು. ಶುದ್ಧ ಕಾಯಕದಲ್ಲಿ ದೇವರನ್ನು ಕಾಣಬೇಕು ಎಂದು ತಿಳಿಸಿದರು.

ಅಭಿನವ ಕಲ್ಮೇಶ್ವರ ಸ್ವಾಮೀಜಿ, ಮಾತೋಶ್ರೀ ಅಕ್ಕಮಹಾದೇವಿ, ಕಾಡಯ್ಯ ಸ್ವಾಮೀಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net