ಕಾಯಕಯೋಗಿ ಪ್ರಶಸ್ತಿ ಪ್ರದಾನ

10Kush04
Published on

ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ನಿವಾಸಿ, ಸಮಾಜ ಸೇವಕ ನಾಗರಾಜು ಅವರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಒಕ್ಕಲಿಗ ಸಮುದಾಯ ನೌಕರರ ಒಕ್ಕೂಟ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಗಿರಿನಗರದಲ್ಲಿ ಆಯೋಜಿಸಿದ್ದ ಕುವೆಂಪು ಜನ್ಮ ದಿನೋತ್ಸವ ಮತ್ತು ರೈತ ದಿನ ಕಾರ್ಯಕ್ರಮದಲ್ಲಿ ಒಟ್ಟು 160 ಜನರಿಗೆ ಕಾಯ ಕಯೋಗಿ ಮತ್ತು ನೇಗಿಲಯೋಗಿ ಪ್ರಶಸ್ತಿ ನೀಡಿ ಗೌರ ವಿಸಲಾಯಿತು.

ಸಾಮಾಜ ಸೇವೆ ಗುರುತಿಸಿ ನಾಗರಾಜ್ ಅವರಿಗೆ ಆದಿಚುಂಚನಗಿರಿ ವಿಜಯನಗರ ಶಾಖಾ ಮಠಾಧಿಶ ಶ್ರೀ ಸೋಮ ನಾಥ ಸ್ವಾಮೀಜಿ ಪ್ರಶಸ್ತಿ ವಿತರಿಸಿದರು. ಶಾಸಕ ಕೃಷ್ಣಪ್ಪ, ಹಿರಿಯ ಪೊಲೀಸ್ ಅಧಿಕಾರಿ ಪ್ರಕಾಶಗೌಡ, ವಿಧಾನ ಪರಿಷತ್ ಸದಸ್ಯ ಡಾ. ಗೊಂವಿದರಾಜ್, ಎಐಟಿಯುಸಿ ರಾಜ್ಯಾಧ್ಯಕ್ಷ ಅನಂತ ಸುಬ್ಬರಾವ್, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇ ಗೌಡ, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ.ಅಂಜನಪ್ಪ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net