ಕಾರಜೋಳ ವಿರುದ್ಧ ದೂರು ದಾಖಲು

Govinda
Published on

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಎಂ. ಕಾರಜೋಳ ಅವರ ವಿರುದ್ಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ. 30ರಂದು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ದೇಗುಲ ಆವರಣದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಮಾತನಾಡಿದ್ದರು.

ದೇಗುಲ ಆವರಣದಲ್ಲಿ ರಾಜಕೀಯ ಪ್ರೇರಿತ ಮಾತುಗಳನ್ನಾಡುವಂತಿಲ್ಲ. ಆದರೂ ಕಾರಜೋಳ ಅವರು ಭಾವನಾತ್ಮಕ ಚುನಾವಣಾ ಭಾಷಣ ಮಾಡಿದ್ದಾರೆ ಎಂದು ಎಫ್‌ಎಸ್‌ಟಿ 3ನೇ ತಂಡದ ಅಧಿಕಾರಿಯಾಗಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿರುವ ಮೊಳಕಾಲ್ಮುರು ಕೃಷಿ ಸಹಾಯಕ ನಿರ್ದೇಶಕ ಎನ್.ಗಿರೀಶ್ ನೀತಿ ಸಂಹಿತೆ ಉಲ್ಲಂಘನೆಯಡಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net