ಕಾರವಾರ ನಗರಸಭೆಗೆ ಸಚಿವ ಕೋಟ ಭೇಟಿ

IMG-20220805-WA0034.jpg
Published on

ಕಾರವಾರ: ನಗರಸಭೆ ಕಚೇರಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶುಕ್ರವಾರ ನಗರಸಭೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ವಿವಿಧ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿಯನ್ನು ಪಡೆದುಕೊಂಡರು .ಆಶ್ರಯ ಯೋಜನೆಗಳಡಿ ಮಂಜೂರಾದ ಕೆಲವು ಮನೆಗಳಿಗೆ ಈವರೆಗೆ ಅನುದಾನ ಬಂದಿಲ್ಲ. ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ, ಯೋಜನೆಯ ಲಾಭ ಬಡ ಜನರಿಗೆ ತಲುಪುವ ವ್ಯವಸ್ಥೆ ಮಾಡಬೇಕು ಎಂದು ನಗರಸಭೆ ಸದಸ್ಯರು ಸಚಿವರಲ್ಲಿ ವಿನಂತಿಸಿದರು.

ಪೌರಾಯುಕ್ತ ಆರ್.ಪಿ.ನಾಯ್ಕ ಮಾತನಾಡಿ, ನಗರಸಭೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳುವಂತೆ ವಿನಂತಿಸಿದರು.

ಸಚಿವ ಕೋಟ ಮೊದಲು ನಗರಸಭೆ ಹೊಸ ಕಟ್ಟಡದ ಎಲ್ಲ ಕೊಠಡಿಗಳಿಗೆ ತೆರಳಿ ಪರಿಶೀಲಿಸಿ, ಅಧಿಕಾರಿಗಳ ಜತೆಗೆ ಕೆಲ ಕಾಲ ಚರ್ಚೆ ನಡೆಸಿದರು.

ನಂತರ ಎಂಎಲ್ ಸಿ ಗಣಪತಿ ಉಳ್ವೇಕರ್ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. ನಗರಸಭೆ ಅಧ್ಯಕ್ಷ ಡಾ. ನಿತಿನ್ ಪಿಕಳೆ, ಉಪಾಧ್ಯಕ್ಷ ಪಿ. ಪಿ. ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ತಾಮಸೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net