ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಸಿಎಂ ಘೊಷಣೆ-ರೂಪಾಲಿ ನಾಯ್ಕ

IMG-20220724-WA0079.jpg
Published on

ಆಗಸ್ಟ್ ಮೊದಲ ವಾರದಲ್ಲಿ ಸಿಎಂ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಘೊಷಣೆ ಮಾಡಲಿದ್ದಾರೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಕಾರವಾರದ ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಗೆ ಅತ್ಯಾವಶ್ಯಕವಾಗಿದೆ. ಈ ನಿಟ್ಟಿನಲ್ಲಿ ನಾವು ಬಹು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ.
ಈ ಹಿಂದೆ ಘೋಷಣೆಯಾದ ಹಣಕ್ಕೆ ಕೋವಿಡ್ ಕಾರಣದಿಂದ ತಡೆ ನೀಡಲಾಗಿತ್ತು. ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದು, ಜಿಲ್ಲೆಯ ಆಸ್ಪತ್ರೆಯ ಅವಶ್ಯಕತೆಯ‌ಬಗ್ಗೆ ಅವರಿಗೂ ಅರಿವಾಗಿದೆ.
ಆಗಸ್ಟ್ 1 ,ಅಥವಾ 2 ರಂದು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net